ಬೆಂಗಳೂರು, ಫೆ 10 ( DaijiworldNews/MS): ಇಂದಿನಿಂದ ವಿಧಾನಮಂಡಲದ ಜಂಟಿ ಅಧಿವೇಶನ ಆರಂಭವಾಗಲಿದ್ದು, ಚುನಾವಣೆಯ ಹೊಸ್ತಿನಲ್ಲಿ ಇದು ಈ ವಿಧಾನಸಭೆಯ 15ನೆಯ ಮತ್ತು ಕೊನೆಯ ಅಧಿವೇಶನ ಆಗಿದೆ.
ಇಂದು ರಾಜ್ಯಪಾಲರು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದು ಅಧಿವೇಶನ ಫೆ. 24ರವರೆಗೆ ನಡೆಯಲಿದೆ. ಇದು ಬಜೆಟ್ ಅಧಿವೇಶನವಾಗಿದ್ದು ಫೆಬ್ರುವರಿ 17ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಬಜೆಟ್ ಮಂಡಿಸಲಿದ್ದಾರೆ. ಫೆಬ್ರುವರಿ 20ರಿಂದ 24ರವರೆಗೂ ಬಜೆಟ್ ಮೇಲೆ ಚರ್ಚೆ ನಡೆಯಲಿದೆ.
ಇನ್ನು ಅಧಿವೇಶನ ನಡೆಯಲಿರುವ ಹಿನ್ನೆಲೆ ವಿಧಾನಸೌಧದ ಸುತ್ತಾಮುತ್ತಾ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.