ನವದೆಹಲಿ, ಫೆ 11 (DaijiworldNews/HR) : ಹೊಸ ತೆರಿಗೆ ಪದ್ಧತಿಯಿಂದ ಜನರ ಕೈಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಣ ಹರಿದಾಡಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾ ರಾಮನ್ ಹೇಳಿದ್ದಾರೆ.
ಬಜೆಟ್ ಕುರಿತು ಮಾತನಾಡಿದ ಅವರು, ಈ ಹಿಂದೆ 2.5 ಲಕ್ಷ ರೂ. ಇದ್ದ ತೆರಿಗೆ ವಿನಾಯಿತಿ ಮಿತಿಯನ್ನು 3 ಲಕ್ಷ ರೂ.ಗೆ ಏರಿಸಲಾಗಿದ್ದು, 50 ಸಾವಿರ ರೂ.ಗಳ ಸ್ಟಾಂಡರ್ಡ್ ಡಿಡಕ್ಷನ್ಗೂ ಅವಕಾಶ ಕಲ್ಪಿಸಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.
ಇನ್ನು 7 ಲಕ್ಷ ರೂ.ವರೆಗಿನ ಆದಾಯಕ್ಕೆ ತೆರಿಗೆ ಇಲ್ಲವಾದ್ದರಿಂದ ಮಧ್ಯಮ ವರ್ಗಕ್ಕೆ ಅನುಕೂಲ ವಾಗಿದೆ ಎಂದು ಹೇಳಿದ್ದಾರೆ.