ಮಾಲತ್ಯ, ಫೆ. 11 (DaijiworldNews/SM) : ಶತಮಾನದಲ್ಲಿಯೇ ಅತ್ಯಂತ ಭೀಕರವಾದ ವಿನಾಶಕಾರಿ ಭೂಕಂಪದಿಂದ ಟರ್ಕಿ ಹಾಗೂ ಸಿರಿಯಾ ನಲುಗಿದ್ದು, ಅಪಾರ ಪ್ರಮಾಣದ ಜೀವ ಹಾಗೂ ಆಸ್ತಿಪಾಸ್ತಿ ನಷ್ಟ ಸಂಭವಿಸಿದೆ.
ಈ ಮಧ್ಯೆ ಫೆಬ್ರವರಿ 6 ರಿಂದ ನಾಪತ್ತೆಯಾಗಿದ್ದ ಬೆಂಗಳೂರು ಮೂಲದ ಟೆಕ್ಕಿ ಮೃತದೇಹ ಇಂದು ಪತ್ತೆಯಾಗಿದೆ. ಮಾಲತ್ಯದಲ್ಲಿ ಹೋಟೆಲ್ ವೊಂದರ ಅವಶೇಷಗಳಡಿ ಸಿಲುಕಿದ್ದ ಟೆಕಿ ವಿಜಯ್ ಕುಮಾರ್ ಅವರ ಮೃತದೇಹವನ್ನು ಹೊರಗೆ ತರಲಾಗಿದೆ ಎಂದು ಟರ್ಕಿಯಲ್ಲಿರುವ ಭಾರತೀಯ ರಾಯಭಾರಿ ಅಧಿಕಾರಿಗಳು ತಿಳಿಸಿದ್ದಾರೆ.
ಭೂಕಂಪದಿಂದಾಗಿ ಇಲ್ಲಿಯವರೆಗೂ ಸುಮಾರು 25,000ಕ್ಕೂ ಅಧಿಕ ಜನರು ಪ್ರಾಣ ಕಳೆದುಕೊಂಡಿದ್ದು, ಅನೇಕ ಕಟ್ಟಡಗಳು ಧ್ವಂಸಗೊಂಡಿವೆ. ಹಲವು ಮಂದಿ ಅವಶೇಷಗಳಡಿ ಸಿಲುಕಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಬದುಕುಳಿದವರಿಗಾಗಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.