ನವದೆಹಲಿ, ಫೆ 12 (DaijiworldNews/HR): ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಹಾರಾಷ್ಟ್ರ ರಾಜ್ಯಪಾಲ ಬಿಎಸ್ ಕೊಶಿಯಾರಿ ರಾಜೀನಾಮೆ ಅಂಗೀಕಾರ ಮಾಡಿದ್ದು, ಮಹಾರಾಷ್ಟ್ರಕ್ಕೆ ನೂತನ ರಾಜ್ಯಪಾಲರನ್ನು ನೇಮಕ ಮಾಡಲಾಗಿದೆ.
ರಮೇಶ್ ಬೈಸ್
ಬಿಜೆಪಿ ನಾಯಕ, ಮಾಜಿ ಸಂಸದ ರಮೇಶ್ ಬೈಸ್ರನ್ನು ದ್ರೌಪದಿ ಮುರ್ಮು ಮಹಾರಾಷ್ಟ್ರದ ರಾಜ್ಯಪಾಲರಾಗಿ ನೇಮಕ ಮಾಡಿದ್ದು, 10 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ರಾಷ್ಟ್ರಪತಿಗಳು ನೇಮಕ ಮಾಡಿದ್ದಾರೆ.
ಇನ್ನು ಅರುಣಾಚಲ ಪ್ರದೇಶದ ರಾಜ್ಯಪಾಲರಾಗಿ ಲೆಫ್ಟಿನೆಂಟ್ ಜನರಲ್ ಕೈವಲ್ಯ ತ್ರಿವಿಕ್ರಮ್ ಪರ್ನಾಯಕ್, ಸಿಕ್ಕಿಂ ರಾಜ್ಯಪಾಲರಾಗಿ ಲಕ್ಷ್ಮಣ್ ಪ್ರಸಾದ್ ಆಚಾರ್ಯ, ಜಾರ್ಖಂಡ್ ರಾಜ್ಯಪಾಲರಾಗಿ ಸಿ.ಪಿ. ರಾಧಾಕೃಷ್ಣನ್, ಅಸ್ಸಾಂ ರಾಜ್ಯಪಾಲರಾಗಿ ಗುಲಾಬ್ ಚಂದ್ ಕಟಾರಿಯಾ ಮತ್ತು ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿ ಶಿವ ಪ್ರತಾಪ್ ಶುಕ್ಲಾ ನೇಮಕಗೊಂಡಿದ್ದಾರೆ.