ಬೆಂಗಳೂರು, ಫೆ 13 ( DaijiworldNews/MS): ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿರುವಂತೆಯೇ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮಹತ್ವ ಹೇಳಿಕೆ ನೀಡಿದ್ದು ನಾನು ರಾಜಕೀಯದಿಂದ ನಿವೃತ್ತಿ ಪಡೆದಿಲ್ಲ ಇನ್ನೂ 5-10 ವರ್ಷ ರಾಜಕೀಯದಲ್ಲಿ ಸಕ್ರಿಯವಾಗಿರುವುದಾಗಿ ಘೋಷಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ರಾಜಕೀಯದಿಂದ ನಿವೃತ್ತಿ ಘೋಷಿಸಿಲ್ಲ. ಚುನಾವಣಾ ಸ್ಪರ್ಧಾ ರಾಜಕೀಯದಿಂದ ದೂರು ಉಳಿದ್ದೇನೆ. ಆದರೆ ಇನ್ನೂ ಎರಡು ಅವಧಿ ಚುನಾವಣೆಯಲ್ಲಿ ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗೆಲುವಿಗಾಗಿ ಶ್ರಮಿಸುತ್ತೇನೆ ಎಂದಿದ್ದಾರೆ.
ಈ ಬಾರಿಯೂ ಬಿಜೆಪಿಯೂ 140ರಿಂದ 150 ಸ್ಥಾನಗಳಲ್ಲಿ ಗೆದ್ದು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲು ತಯಾರಿ ನಡೆಸುತ್ತಿದೆ. ಅಧಿವೇಶನ ಮುಗಿದ ಮೇಲೆ ಕಾರ್ಯಕರ್ತರೊಂದಿಗೆ ರಾಜ್ಯ ಪ್ರವಾಸ ಆರಂಭ ಮಾಡಲಿದ್ದೇವೆ ಎಂದು ಹೇಳಿದ್ದಾರೆ.