ಬೆಂಗಳೂರು, ಫೆ 13 ( DaijiworldNews/MS): ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಗ್ರಾಹಕರ ಕೈ ಸುಡುವಂತಾಗಿದ್ದು, ಇದೀಗ ರಾಜ್ಯದ ಜನರಿಗೆ ಮತ್ತೊಮ್ಮೆ ವಿದ್ಯುತ್ ದರದಲ್ಲಿಯೂ ಭಾರೀ ಏರಿಕೆಯಾಗುವ ಸಾಧ್ಯತೆ ಇದೆ.
ಕೆಲ ತಿಂಗಳ ಹಿಂದೆಯಷ್ಟೇ ಇಂಧನ ಹೊಂದಾಣಿಕೆಯ ಶುಲ್ಕವನ್ನು ಪರಿಷ್ಕರಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಆದೇಶ ಹೊರಡಿಸಿತ್ತು. ಇದೀಗ ಮತ್ತೆ ರಾಜ್ಯದ ವಿದ್ಯುತ್ ವಿತರಣಾ ಕಂಪನಿಗಳು ವಿದ್ಯುತ್ ದರ ಪರಿಷ್ಕರಣೆ ಕೋರಿರುವ ಹಿನ್ನೆಲೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಫೆಬ್ರವರಿ 13 ರಿಂದ ಮಾರ್ಚ್ 1ರವರೆಗೆ ಸಾರ್ವಜನಿಕ ಆದಾಲತ್ ನಡೆಸಲಿದೆ.
ಈಗಾಗಲೇ ದೈನಂದಿನ ವಸ್ತುಗಳ ಬೆಲೆಗಳು ಮುಗಿಲು ಮುಟ್ಟುತ್ತಿದ್ದು, ಜನರು ತತ್ತರಿಸುತ್ತಿದ್ದಾರೆ.ಇದರೊಂದಿಗೆ ಅಕ್ಟೋಬರ್ ನಲ್ಲಿ ವಿದ್ಯುತ್ ದರ ಏರಿಕೆ ಕಂಡಿತ್ತು .ಇದರ ಬೆನ್ನಲ್ಲೇ ಇದಿಗ ಮತ್ತೆ ವಿದ್ಯುತ್ ಬಿಲ್ ದರ ಏರಿಕೆಯಿಂದ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.
ಈ ಕುರಿತು ಮಾತನಾಡಿದ ಬೃಹತ್ ಬೆಂಗಳೂರು ಹೋಟೆಲ್ ಅಸೋಸಿಯೇಶನ್ ಅಧ್ಯಕ್ಷ ಪಿ.ಸಿ. ರಾವ್ ಮಾತನಾಡಿ, ಇದೊಂದು ಅವೈಜ್ಞಾನಿಕ ನಿರ್ಣಯ. ಗ್ರಾಹಕರ ಮೇಲೆ ಹೊರೆ ಹಾಕೋದು ಸಮಂಜಸವಲ್ಲ ಎಂದು ಕಿಡಿಕಾರಿದ್ದಾರೆ.