ಬೆಂಗಳೂರು, ಫೆ 13 ( DaijiworldNews/MS): ಹಿರಿಯ ಕಾಂಗ್ರೆಸ್ ನಾಯಕ ಮತ್ತು ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗಿದೆ. ತಿರುವನಂತಪುರಂನಿಂದ ಭಾನುವಾರ ಸಂಜೆ ವಿಮಾನದ ಮೂಲಕ ಬೆಂಗಳೂರಿಗೆ ಕರೆತಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಮ್ಮನ್ ಚಾಂಡಿ ಅವರಿಗೆ ನ್ಯುಮೋನಿಯಾ ಸೋಂಕಿನಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಕೆಲವು ದಿನಗಳಿಂದ ಅವರನ್ನು ತಿರುವನಂತಪುರಂನ ನೇಯ್ಯಟ್ಟಿನಕರ ಎಂಬಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಉಮ್ಮನ್ ಚಾಂಡಿ ಅವರಿಗೆ ಆರೋಗ್ಯ ಪರಿಸ್ಥಿತಿ ಗಂಭೀರವಾದ್ದರಿಂದ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ ಎನ್ನಲಾಗಿದೆ. ಇನ್ನೊಂದು ಮೂಲದ ಪ್ರಕಾರ ಚಾಂಡಿ ಅವರು ಗಂಟಲಿನ ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ.
ಕಾಂಗ್ರೆಸ್ ಪಕ್ಷ ಏರ್ಪಡಿಸಿದ್ದ ಚಾರ್ಟರ್ಡ್ ಫ್ಲೈಟ್ನಲ್ಲಿ ಚಾಂಡಿ ಅವರನ್ನು ಬೆಂಗಳೂರಿಗೆ ಕರೆತರಲಾಗಿದ್ದು, ಅವರ ಪತ್ನಿ ಮರಿಯಮ್ಮ, ಪುತ್ರಿಯರಾದ ಅಚ್ಚು ಉಮ್ಮನ್ ಮತ್ತು ಮರಿಯಾ ಉಮ್ಮನ್ ಮತ್ತು ಮಗ ಚಾಂಡಿ ಉಮ್ಮನ್ ಜೊತೆಗಿದ್ದರು.