ನವದೆಹಲಿ, ಫೆ 14 (DaijiworldNews/HR): ಮುಂದಿನ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಎದುರಾಳಿಗಳೇ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕೇಂದ್ರ ಸರ್ಕಾರ ಕೈಗೊಂಡಿರುವ ಜನಪರ ನಿಲುಗಳಿದಾಂಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಜನರು ಜೈ ಎನ್ನಲ್ಲಿದ್ದಾರೆ ಎಂದರು.
ಇನ್ನು ಬಿಜೆಪಿ ಸರ್ಕಾರಕ್ಕೆ ಅಕೃತ ವಿರೋಧ ಪಕ್ಷವೇ ಇಲ್ಲ. 2024 ರ ಚುನಾವಣೆಯಲ್ಲಿ ಬಿಜೆಪಿಗೆ ಪ್ರಮುಖ ವಿರೋಧ ಪಕ್ಷದ ಬಗ್ಗೆ ದೇಶದ ಜನರು ನಿರ್ಧರಿಸುತ್ತಾರೆ ಎಂದು ಹೇಳಿದ್ದಾರೆ.