ಬೆಂಗಳೂರು, ಫೆ 14 (DaijiworldNews/MS): ಬಾದಾಮಿ ಬಿಟ್ಟು, ಕೋಲಾರದಿಂದ ಸ್ಪರ್ಧೆ ಮಾಡುವ ತಯಾರಿಯಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯಗೆ ಈಗ ಸಾಮೂಹಿಕ ರಾಜೀನಾಮೆ ಬೆದರಿಕೆ ಕಗ್ಗಂಟಾಗಿ ಪರಿಣಮಿಸಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸ ಮುಂದೆ ನೂರಾರು ಅಭಿಮಾನಿಗಳು ಆಗಮಿಸಿ ಘೋಷಣೆ ಕೂಗುವ ಮೂಲಕ ಬಾದಾಮಿ ಕ್ಷೇತ್ರದಿಂದ ಸ್ಪರ್ಧೆಗೆ ಒತ್ತಾಯ ಮಾಡುತ್ತಿದ್ದಾರೆ.
ಇದಲ್ಲದೆ ಬಾದಾಮಿಯಿಂದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆಮಾಡಲೇಬೇಕು, ಸಿದ್ದರಾಮಯ್ಯ ಸ್ಪರ್ಧೆ ಮಾಡದಿದ್ರೆ ಸಾಮೂಹಿಕ ರಾಜೀನಾಮೆ ಕೊಡುತ್ತೇವೆ ಎಂದು ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ ಸದಸ್ಯರು ಎಚ್ಚರಿಕೆ ನೀಡಿದ್ದಾರೆ.
ಈ ಬೆಳವಣಿಗೆಯಿಂದ ಕಾಂಗ್ರೆಸ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಇಕ್ಕಟ್ಟಿಗೆ ಸಿಲುಕಿದ್ದು, ಚುನಾವಣೆಗೆ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಅನ್ನೋದನ್ನು ಕುತೂಹಲ ಹುಟ್ಟಿಸಿದೆ.