ಲಕ್ನೋ ಫೆ 14 (DaijiworldNews/MS): ಅತಿಕ್ರಮಣ ಜಾಗ ತೆರವು ಕಾರ್ಯಾಚರಣೆ ವೇಳೆ ತಾಯಿ - ಮಗಳು ಸಜೀವ ದಹನವಾದ ಘಟನೆ ಉತ್ತರ ಪ್ರದೇಶದ ಕಾನ್ಪುರ ದೇಹತ್ನ ರೂರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಪ್ರಮೀಳಾ ದೀಕ್ಷಿತ್ (45) ನೇಹಾ (20) ಸಜೀವ ಎಂದು ಗುರುತಿಸಲಾಗಿದೆ.
ಸ್ಥಳೀಯ ಅಧಿಕಾರಿಗಳ ಸಮ್ಮುಖದಲ್ಲಿ ಸರ್ಕಾರ ಜಾಗ ಒತ್ತುವರಿ ತೆರವು ಕಾರ್ಯಚರಣೆ ವೇಳೆ ಈ ಘಟನೆ ನಡೆದಿದೆ. ಕಾರ್ಯಾಚರಣೆ ಆರಂಭದಲ್ಲಿ ಗುಡಿಸಲಿಗೆ ಬೆಂಕಿ ಹಚ್ಚಿದ್ದಾರೆ. ಈ ವೇಳೆ ಜನರೆಲ್ಲ ಓಡಿ ಜೀವ ಉಳಿಸಿಕೊಂಡಿದ್ದಾರೆ. ಆದರೆ ತಾಯಿ -ಮಗಳು ಬೆಂಕಿಗಾಹುತಿಯಾಗಿದ್ದಾರೆ.
ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ. ಸಂಬಂಧಿತ ಸೆಕ್ಷನ್ಗಳಡಿ 20ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸ್ಥಳೀಯ ಅಧಿಕಾರಿಗಳು ಹಾಗೂ ಪೊಲೀಸರು ತಾಯಿ - ಮಗಳು ತಾವೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿದ್ದಾರೆ. ಆದರೆ ಇದನ್ನು ತಳ್ಳಿ ಹಾಕಿರುವ ಗ್ರಾಮಸ್ಥರು ಇದೊಂದು ಕೊಲೆ ಎಂದು ಆರೋಪಿಸಿದ್ದಾರೆ
ಈ ಸಂಬಂಧ ಪೊಲೀಸ್ ಅಧಿಕಾರಿ ಹಾಗೂ ಸರ್ಕಾರಿ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.