ತುಮಕೂರು, ಫೆ 16 (DaijiworldNews/MS): ಕಾಂಗ್ರೆಸ್ನಲ್ಲಿ ಕೇಳಿ ಬರುತ್ತಿರುವ ಮುಂದಿನ ಸಿಎಂ ಯಾರು ಎಂಬ ಚರ್ಚೆಯ ಪರ ವಿರೋಧದ ನಡುವೆಯೇ ನಾನು ಕೂಡ ಸಿಎಂ ರೇಸ್ನಲ್ಲಿದ್ದೇನೆ ಎಂದು ಹೇಳುವ ಮೂಲಕ ಮಾಜಿ ಡಿಸಿಎಂ ಪರಮೇಶ್ವರ್ ಸಿಎಂ ಆಗುವ ಆಸೆ ಬಿಚ್ಚಿಟ್ಟಿದ್ದಾರೆ.
ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಸುದ್ದಿಗಾರರ ಜೊತೆ ಈ ಬಗ್ಗೆ ಮಾತನಾಡಿದ್ದಾರೆ. ನಾನೂ ಕೂಡ ಸಿಎಂ ಹುದ್ದೆಯ ಆಕಾಂಕ್ಷಿ ಕಾಂಗ್ರೆಸ್ ಪಕ್ಷದಲ್ಲಿ ಜಾತಿ ಆಧಾರದ ಮೇಲೆ ಯಾರನ್ನೂ ಮುಖ್ಯಮಂತ್ರಿ ಮಾಡಲ್ಲ, ದಲಿತ ಮುಖ್ಯಮಂತ್ರಿ ಎನ್ನುವ ಪ್ರಶ್ನೆ ಬರಲ್ಲ ಎಂದಿದ್ದಾರೆ.
ಮುಖ್ಯಮಂತ್ರಿ ಆಗಬೇಕು ಎಂದು ಎಲ್ಲರಿಗೂ ಆಸೆ ಇರುತ್ತದೆ ಅಲ್ಲವಾ..? ನಮ್ಮ ಪಕ್ಷದಲ್ಲಿ ಒಂದು ಹತ್ತು ಜನರಿಗೆ ಆಸೆ ಇದೆ, ಅದರಲ್ಲಿ ನಾನೂ ಒಬ್ಬ . ನನಗೆ ಎರಡು ಬಾರಿ ಸಿಎಂ ಆಗುವ ಅವಕಾಶ ಕೈತಪ್ಪಿದೆ. ನನಗೆ ಅದೃಷ್ಟವಿದ್ದರೆ ಮುಂದಿನ ಬಾರಿ ಮುಖ್ಯಮಂತ್ರಿಯಾಗುತ್ತೇನೆ ಎಂಬ ವಿಶ್ವಾಸವಿದೆ ಎಂದು ಪರಮೇಶ್ವರ್ ಹೇಳಿದ್ದಾರೆ