ನವದೆಹಲಿ, ಫೆ 16 (DaijiworldNews/HR): ಕಾನ್ಮ್ಯಾನ್ ಸುಖೇಶ್ ಚಂದ್ರಶೇಖರ್ ಅವರನ್ನು ಸುಲಿಗೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ.
ಮಾಜಿ ರೆಲಿಗೇರ್ ಪ್ರಮೋಟರ್ ಮಲ್ವಿಂದರ್ ಸಿಂಗ್ ಅವರ ಪತ್ನಿ ಜಪ್ನಾ ಸಿಂಗ್ ಅವರಿಗೆ 3.5 ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಇಡಿ ಅವರನ್ನು ಬಂಧಿಸಲಾಗಿದೆ.
ಇನ್ನು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಅವರನ್ನು ಒಂಬತ್ತು ದಿನಗಳ ಇಡಿ ರಿಮಾಂಡ್ಗೆ ಕಳುಹಿಸಿದೆ. 200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ಪ್ರಮುಖ ಆರೋಪಿ ಸುಕೇಶ್ ಚಂದ್ರಶೇಖರ್ ಮತ್ತು ಅವರ ಪತ್ನಿ, ನಟಿ ಲೀನಾ ಮರಿಯಾ ಪೌಲ್, ಜೈಲಿನಿಂದ ಸುಲಿಗೆ ದಂಧೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಇಡಿ ಬಂಧಿಸಿದೆ.