ಬೆಂಗಳೂರು, ಫೆ 17 (DaijiworldNews/MS): ಬಜೆಟ್ ಮಂಡನೆ ಮುನ್ನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಟೆಂಪಲ್ ರನ್ ಮಾಡಿದ್ದಾರೆ.
ಸಿಎಂ ಬೊಮ್ಮಾಯಿ ಅವರು ಇಂದು ಬೆಳಗ್ಗೆ ಆರ್.ಟೊ ನಗರದ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನ ಪಡೆದು, ಪೂಜೆ ಸಲ್ಲಿಸಿದ್ದಾರೆ. ಬಳಿಕ ವಿಧಾನಸೌಧ ಸಮೀಪದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೂ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಕರ್ನಾಟಕದ ಜನತೆ ಹೆಸರಿನಲ್ಲಿ ಅರ್ಚನೆ ಕೂಡ ಮಾಡಿಸಿದ್ದಾರೆ.
ಅಲ್ಲಿಂದ ಅವರು ವಿಧಾನಸೌಧಕ್ಕೆ ತೆರಳಿದ್ದು 2023-24 ಆಯವ್ಯಯ ಪತ್ರಕ್ಕೆ ಸಚಿವ ಸಂಪುಟದ ಅನುಮೋದನೆ ಪಡೆಯಲಿದ್ದಾರೆ.
ಇದು ಬಿಜೆಪಿ ಸರ್ಕಾರದ ಈ ಅವಧಿಯ ಕೊನೆಯ ಬಜೆಟ್ ಮಂಡನೆಯಾಗಿದೆ. ಚುನಾವಣೆ ಸಮಯದಲ್ಲಿ ಸಿಎಂ ಬೊಮ್ಮಾಯಿ ಮಂಡಿಸುತ್ತಿರುವ ಬಜೆಟ್ ಮೇಲೆ ನಿರೀಕ್ಷೆಗಳು ಬೆಟ್ಟದಷ್ಟಿದೆ