ಬೆಂಗಳೂರು, ಫೆ 17 (DaijiworldNews/HR): 100 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆಯಡಿ 1000 ಹೊಸ ಶಾಲಾ-ಕಾಲೇಜು ಮಕ್ಕಳ ಬಸ್ ಓಡಾಟ ನಡೆಸಲಿದ್ದು, ಇದರಿಂದ ಹೆಚ್ಚುವರಿಯಾಗಿ 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ರಾಜ್ಯ ಬಜೆಟ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಕರ್ನಾಟಕದ ಎಲ್ಲಾ ಪ್ರೌಢ ಶಾಲಾ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ದೃಷ್ಟಿಯಿಂದ ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಆರಂಭಿಸುವುದಾಗಿ ಎಂದು ಘೋಷಿಸಿದ್ದಾರೆ.
ಇನ್ನು ಈ ಬಾರಿಯ ಬಜೆಟ್ ಗಾತ್ರ ಒಟ್ಟು 3 ಲಕ್ಷ 9 ಸಾವಿರ 182 ಕೋಟಿ ರೂ. ಆಗಿದೆ.