ಬೆಂಗಳೂರು, ಫೆ 17 (DaijiworldNews/MS): ಗುರುಪುರ ಮತ್ತು ನೇತ್ರಾವತಿ ನದಿಗಳ ಪಾತ್ರದಲ್ಲಿ ಜಲಸಾರಿಗೆ ಸಂಪರ್ಕವನ್ನು ಕಲ್ಪಿಸಲು ಬಾರ್ಜ್ಗಳ ಸೇವೆಗಳನ್ನು ಸಾರ್ವಜನಿಕ -ಖಾಸಗಿ ಸಹಭಾಗಿತ್ವದಲ್ಲಿ ಪ್ರಾರಂಭಿಸಲಾಗುವುದು ಎಂದು ಈ ಬಾರಿಯ ಬಜೆಟ್ ನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.
ಮಂಗಳೂರು-ಹಂಗಾರಕಟ್ಟೆಯಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಲೈಟ್ ಕಾರ್ಗೋ ಬೋಟ್ ಸೇವೆ ಪ್ರಾರಂಭಿಸಲಾಗುವುದು ಎಂದು ಹೇಳಿದ್ದಾರೆ
ಹಂಗಾರಕಟ್ಟೆ ಮತ್ತು ಉಡುಪಿಯಲ್ಲಿ ಕೊಚ್ಚಿನ ಶಿಪ್ ಯಾರ್ಡ್ ಲಿಮಿಟೆಡ್ರವರಿಂದ ದೋಣಿ ನಿರ್ಮಾಣವನ್ನು ಪ್ರಾರಂಭಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಹಳೆ ಮಂಗಳೂರು ಬಂದರಿನಲ್ಲಿ ಹೆಚ್ಚುವರಿ ಶಿಪ್ ಯಾರ್ಡ್ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗುವುದು. ಇದು ಕರಾವಳಿ ಪ್ರದೇಶದಲ್ಲಿ ಕೈಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳ ಬೆಳವಣಿಗೆಗೆ ಪೂರಕವಾಗಲಿದೆ.
ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಸಾರ್ವಜನಿಕ ಖಾಸಗಿ ಸಹಭಾಗಿತ್ವದೊಂದಿಗೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಮರೀನಾವನ್ನು ಅಭಿವೃದ್ಧಿಪಡಿಸಲಾಗುದು ಎಂದು ತಿಳಿಸಿದ್ದಾರೆ
ಪ್ರಧಾನ ಮಂತ್ರಿಗಳ ಆಶಯದಂತೆ, ಬ್ಯ್ಲೂ ಎಕಾನಾಮಿ ಯ ಅಭಿವೃದ್ಧಿಗಾಗಿ ಎಡಿಬಿ ಸಹಯೋಗದೊಂದಿಗೆ ಅಂದಾಜು 1100ಕೋಟಿ ರೂ.ಗಳ ವೆಚ್ಚದಲ್ಲಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರವು ಉದ್ದೇಶಿಸಿದೆ.
ಕರಾವಳಿ ಪ್ರದೇಶದಲ್ಲಿ ಜನರ ಸುಗಮ ಸಂಚಾರಕ್ಕಾಗಿ ಮತ್ತು ವಾಣಿಜ್ಯ ವ್ಯವಹಾರಗಳನ್ನು ಉತ್ತಮಗೊಳಿಸಲುಮಂಗಳೂರು - ಕಾರವಾರ - ಗೋವಾ - ಮುಂಬಯಿ ವಾಟರ್ ವೇಸ್ ಅನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದ್ದಾರೆ.