ಬೆಂಗಳೂರು, ಫೆ 17 (DaijiworldNews/MS): 2023-24 ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಕ್ರೀಡಾ ವಿಭಾಗಕ್ಕೆ ಹೆಚ್ಚು ಒತ್ತು ನೀಡಲಾಗಿದ್ದು, ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.
100 ಕೋಟಿ ರೂ. ವೆಚ್ಚದಲ್ಲಿ ಎಲ್ಲಾ ಜಿಲ್ಲೆ ಹಾಗೂ ತಾಲೂಕು ಸ್ಟೇಡಿಯಂಗಳಲ್ಲಿ ಜಿಮ್ ಸ್ಥಾಪನೆಗೆ ಕ್ರಮ ಮಹಿಳೆಯರು , ವಿಶೇಷಚೇತನರು, ಯುವಜನತೆಗೆ ಜಿಮ್ ಸ್ಥಾಪಿಸಲಾಗುವುದು. ಖಾಸಗಿ ಕ್ರೀಡಾ ಸಂಸ್ಥೆಗಳಿಗೆ 25 ಲಕ್ಷ ರೂಪಾಯಿ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಹೇಳಿದ್ದಾರೆ.
ಬಾಸ್ಕಟ್ , ವಾಲಿಬಾಲ್ ಪರಿಚಯಿಸಲು ತರಬೇತಿ ಕೇಂದ್ರ ತೆರಯಲಾಗುವುದು. ಖೋ-ಖೋ, ಕುಸ್ತಿ, ಕಬಡ್ಡಿ, ಕಂಬಳ, ಎತ್ತಿನಗಾಡಿ ಓಟ, ದೇಸಿ ಕ್ರೀಡಾಕೂಟ ಆಯೋಜನೆಗೆ ಕ್ರೀಡಾ ಅಂಕಣ ಸ್ಥಾಪನೆ ಮಾಡಲಾಗಿದೆ. ಅಂತಾರಾಷ್ಟ್ರೀಯ ಕ್ರೀಡಾ ತರಬೇತಿಗೆ 50 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಕರ್ನಾಟಕ ಒಲಿಂಪಿಕ್ ಕನಸಿನ ಯೋಜನಾ ನಿಧಿ ಸ್ಥಾಪನೆ ಮಾಡಲಾಗುವುದು ಎಂದಿದ್ದಾರೆ.