ಪಟ್ನಾ, ಫೆ 19 (DaijiworldNes/HR): ಭಾರತ್ ಜೋಡೊ ಯಾತ್ರೆಯ ಯಶಸ್ಸಿನಿಂದ ಕಾಂಗ್ರೆಸ್ ಸುಮ್ಮನೇ ಕುಳಿತುಕೊಳ್ಳಬಾರದು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಎಲ್ಲಾ ಪ್ರಯತ್ನಗಳನ್ನು ಮಾಡಬೇಕು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಬಿಜೆಪಿಯನ್ನು ಸೋಲಿಸುವುದಕ್ಕಾಗಿ ಎಲ್ಲ ಪ್ರತಿಪಕ್ಷಗಳನ್ನು ಒಗ್ಗೂಡಿಸಿ, ಒಗ್ಗಟ್ಟಾಗಿ ಸ್ಪರ್ಧಿಸುವ ನಿಟ್ಟಿನಲ್ಲಿ ಶೀಘ್ರ ನಿರ್ಧಾರ ತೆಗೆದುಕೊಳ್ಳಬೇಕು ಎಂದರು.
ಇನ್ನು ಪ್ರತಿಪಕ್ಷಗಳು ಒಗ್ಗಟ್ಟಾಗಿ ಸ್ಪರ್ಧಿಸಿದರೆ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಸ್ಥಾನಗಳ ಸಂಖ್ಯೆ 100ಕ್ಕಿಂತಲೂ ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ.