ಬೆಂಗಳೂರು, ಫೆ 21 (DaijiworldNews/MS): ರಾಜ್ಯದಲ್ಲಿ ಈ ಬಾರಿ 1,907 ಕೇಂದ್ರಗಳಲ್ಲಿ ಪಿಯುಸಿ ಪರೀಕ್ಷೆ ಹಾಗೂ 3,300 ಕೇಂದ್ರಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಎಸ್ಎಸ್ಎಲ್ಸಿ ಹಾಗೂ ಪಿಯುಸಿಯ ಎರಡು ಪ್ರಮುಖ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸುವ ಸಂಬಂಧ ಸಚಿವರು ಇಂದು ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ಅವರೊಂದಿಗೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಹಿರಿಯ ಅಧಿಕಾರಿ ,ಶಿಕ್ಷಣ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ.
ಇನ್ನು ಎಸ್ಎಸ್ಎಲ್ಸಿ ಪರೀಕ್ಷೆ ಮಾರ್ಚ್ 31 ರಿಂದ ಏಪ್ರಿಲ್ 15 ವರೆಗೆ ನಡೆಯಲಿದ್ದು, ಮಾರ್ಚ್ 9 ರಿಂದ 29 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದೆ.