ಕೊಹಿಮಾ, ಫೆ 22 (DaijiworldNews/DB): 2024ಕ್ಕೆ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಒಕ್ಕೂಟವು ಅಧಿಕಾರ ಹಿಡಿಯುವುದು ನಿಶ್ಚಿತ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ನಾಗಾಲ್ಯಾಂಡ್ನಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಅವರು, ಮುಂಬರು ಸಾರ್ವತ್ರಿಕ ಚುನಾವಣೆಯಲ್ಲಿ ವಿಪಕ್ಷಗಳನ್ನು ಕಾಂಗ್ರೆಸ್ ಮುನ್ನಡೆಸಲಿದೆ. ನಮ್ಮೆಲ್ಲರ ಒಗ್ಗಟ್ಟಿನಿಂದ ಅಧಿಕಾರಕ್ಕೆ ಏರುವುದು ನಿಶ್ಚಿತ ಎಂದರು.
ಕರ್ನಾಟಕ, ಮಣಿಪುರ, ಗೋವಾ, ಮಧ್ಯಪ್ರದೇಶಗಳಲ್ಲಿ ಬಿಜೆಪಿಯು ಶಾಸಕರ ಮೇಲೆ ತೀವ್ರ ಒತ್ತಡ ಹೇರಿ ಚುನಾಯಿತ ಸರ್ಕಾರವನ್ನು ಬೀಳಿಸುತ್ತಿದೆ. ಆ ಮೂಲಕ ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ದೇಶದ ಪ್ರಜಾಪ್ರಭುತ್ವದ ರಕ್ಷಣೆಯಾಗಬೇಕಾದರೆ ಕಾಂಗ್ರೆಸ್ ನೇತೃತ್ವದ ಮೈತ್ರಿ ಒಕ್ಕೂಟ ಅಧಿಕಾರಕ್ಕೇರುವುದು ಅವಶ್ಯವಿದೆ. ಸಂವಿಧಾನವನ್ನು ಅನುಸರಿಸಿಕೊಂಡು ಹೋಗಲು ದೇಶದಲ್ಲಿ ಈ ಅನಿವಾರ್ಯತೆ ಇದೆ. ಈ ಸಂಬಂಧ ಎಲ್ಲಾ ವಿಪಕ್ಷಗಳೊಂದಿಗೆ ಮಾತುಕತೆಗಳು ನಡೆಯುತ್ತಿವೆ ಎಂದರು.