ನವದೆಹಲಿ, ಫೆ 22 (DaijiworldNews/MS): ಅಮೆರಿಕದ ನೆವಾರ್ಕ್ನಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾವನ್ನು ವಿಮಾನ ಸ್ವೀಡನ್ನಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ. ಇಂಜಿನ್ ಒಂದರಲ್ಲಿ ತೈಲ ಸೋರಿಕೆಯಾದ ಕಾರಣ ಬುಧವಾರ ಸ್ಟಾಕ್ಹೋಮ್ಗೆ ತಿರುಗಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೋಯಿಂಗ್ 777-300ER ವಿಮಾನದೊಂದಿಗೆ ಕಾರ್ಯನಿರ್ವಹಿಸುತ್ತಿದ್ದ ವಿಮಾನದ ಎಂಜಿನ್ ಒಂದರಲ್ಲಿ ತೈಲ ಸೋರಿಕೆಯಾಗಿದೆ. ತೈಲ ಸೋರಿಕೆಯ ನಂತರ, ಎಂಜಿನ್ ಅನ್ನು ಸ್ಥಗಿತಗೊಳಿಸಲಾಯಿತು ಮತ್ತು ನಂತರ ವಿಮಾನವು ಸುರಕ್ಷಿತವಾಗಿ ಸ್ಟಾಕ್ಹೋಮ್ನಲ್ಲಿ ಇಳಿಸಲಾಗಿದೆ ಎಂದು ಹಿರಿಯ ಡಿಜಿಸಿಎ ಅಧಿಕಾರಿ ತಿಳಿಸಿದ್ದಾರೆ.
ಸುಮಾರು 300 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಂಡುಬಂದಿದ್ದು, ಭೂ ಸ್ಪರ್ಶ ಮಾಡಿದ ಬಳಿಕದ ಪರಿಶೀಲನೆಯ ಸಮಯದಲ್ಲಿ, ಎಂಜಿನ್ ಎರಡರ ಡ್ರೈನ್ ಮಾಸ್ಟ್ನಿಂದ ತೈಲ ಹೊರಬರುತ್ತಿರುವುದು ಕಂಡುಬಂದಿದೆ ಪರಿಶೀಲನೆ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ