ಚೆನ್ನೈ, ಫೆ 23 (DaijiworldNews/HR): ಭಾರತದ ಮೊದಲ ಗವರ್ನರ್ ಜನರಲ್ ಸಿ ರಾಜಗೋಪಾಲಾಚಾರಿ ಅವರ ಮೊಮ್ಮಗ ಸಿಆರ್ ಕೇಶವನ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿರುವ ಕೇಶವನ್ ಅವರು ತಮ್ಮ ರಾಜೀನಾಮೆ ಪತ್ರವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿದ್ದು, ಪಕ್ಷವು ಯಾವುದನ್ನು ಸಂಕೇತಿಸುತ್ತದೆ, ಯಾವುದನ್ನು ಪ್ರತಿನಿಧಿಸುತ್ತದೆ ಅಥವಾ ಪ್ರಚಾರ ಮಾಡಲು ಬಯಸುವುದಿಲ್ಲ ಎಂಬುದಕ್ಕೆ ಇನ್ನು ಮುಂದೆ ಒಪ್ಪಲು ಸಾಧ್ಯವಿಲ್ಲ ಹೇಳಿದ್ದಾರೆ.
ಇನ್ನು ನಾನು ಹೊಸ ಮಾರ್ಗವನ್ನು ರೂಪಿಸುವ ಸಮಯ ಬಂದಿದ್ದು, ನಾನು ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.