ಭೋಪಾಲ್, ಫೆ 25 (DaijiworldNews/HR): ಮಧ್ಯ ಪ್ರದೇಶದ ರೇವಾ-ಸತ್ನಾ ಗಡಿಯ ರಸ್ತೆಯಲ್ಲಿ ನಿಲ್ಲಿಸಿದ್ದ ಬಸ್ಗಳಿಗೆ ಟ್ರಕ್ ಢಿಕ್ಕಿ ಹೊಡೆದು 8 ಮಂದಿ ಮೃತಪಟ್ಟು, 50 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಸತ್ನಾ ನಗರದಲ್ಲಿ ಕೋಲ್ ಮಹಾಕುಂಭದಲ್ಲಿ ಭಾಗಿಯಾಗಿ ಬರುತ್ತಿದ್ದ ಬಸ್ಸಿನಲ್ಲಿದ್ದ ಪ್ರಯಾಣಿಕರು ಆಹಾರಕ್ಕಾಗಿ ಬಸ್ಸನ್ನು ರಸ್ತೆ ಬದಿ ನಿಲ್ಲಿಸಿದ್ದು, ಈ ವೇಳೆ ರೇವಾ ಕಡೆಯಿಂದ ವೇಗವಾಗಿ ಬಂದ ಟ್ರಕ್ ರಸ್ತೆ ಬದಿ ನಿಲ್ಲಿಸಿದ್ದ ಮೂರು ಬಸ್ ಗಳಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಒಂದು ಬಸ್ ಕಂದಕಕ್ಕೆ ಉರುಳಿದ್ದು, 8 ಮಂದಿ ಮೃತಪಟ್ಟಿದ್ದಾರೆ ಸುಮಾರು 50 ಮಂದಿ ಗಾಯಗೊಂಡಿದ್ದಾರೆ.
ಇನ್ನು ಬಸ್ಗಳಿಗೆ ಹಿಂದಿನಿಂದ ಬಂದು ಟ್ರಕ್ ಢಿಕ್ಕಿ ಹೊಡೆದಿದ್ದು, ಟ್ರಕ್ನ ಚಕ್ರಗಳು ಸಿಡಿದು ಹೋಗಿದ್ದರಿಂದ ಚಾಲಕ ನಿಯಂತ್ರಣ ಕಳೆದುಕೊಂಡು ಈ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿ ಹೇಳಿದ್ದಾರೆ.