ಬೆಂಗಳೂರು, ಫೆ 26 (DaijiworldNews/MS): ಬೆಂಗಳೂರಿನ ಕೆ ಆರ್ ಪುರಂ ರೈಲ್ವೆ ನಿಲ್ದಾಣದ ಬಳಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ದುಷ್ಕರ್ಮಿಗಳು ಕಲ್ಲೆಸೆದಿದ್ದಾರೆ. ಪರಿಣಾಮ ರೈಲಿನ 2 ಗಾಜಗಳಿಗೆ ಹಾನಿಯಾಗಿದ್ದು, ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ನೈಋತ್ಯ ರೈಲ್ವೆ ಇಲಾಖೆ ತಿಳಿಸಿದೆ.
ಘಟನೆ ಕುರಿತು ರೈಲ್ವೆ ಸಂರಕ್ಷಣಾ ಪಡೆ ದೂರು ದಾಖಲಿಸಿದ್ದು , ಸದ್ಯ ಕಿಡಿಗೇಡಿಗಳಿಗಾಗಿ ರೇಲ್ವೆ ಪೊಲೀಸರು ಬಲೆ ಬೀಸಿದ್ದಾರೆ. ಈ ಬಗ್ಗೆ ರೇಲ್ವೆ ಇಲಾಖೆ ವಿಷಾದ ವ್ಯಕ್ತಪಡಿಸಿದ್ದು ಬೆಂಗಳೂರು ರೇಲ್ವೆ ವಿಭಾಗೀಯ ಕಚೇರಿ ಇಲಾಖೆಗೆ ಸಂಬಂಧದಿಸಿದ ವಸ್ತುಗಳಿಗೆ ಹಾನಿಯುಂಟು ಮಾಡಿದರೆ, ಅಂತವರ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.
ಇನ್ನು ಜನವರಿ ಮತ್ತು ಫೆಬ್ರವರಿಯಲ್ಲಿ ಒಟ್ಟು 21 ಕಲ್ಲು ತೂರಾಟ ಪ್ರಕರಣಗಳು ವರದಿಯಾಗಿದ್ದು, ಬೆಂಗಳೂರು ವಿಭಾಗದಲ್ಲಿ ಇನ್ನೂ 13 ಪ್ರಕರಣಗಳು ದಾಖಲಾಗಿವೆ ಎಂದು ನೈರುತ್ಯ ರೇಲ್ವೆ ಇಲಾಖೆ ಮಾಹಿತಿ ನೀಡಿದೆ.