ರಾಮಗಢ, ಫೆ 26 (DaijiworldNews/DB): ಜಾರ್ಖಂಡ್ನ ರಾಮಗಢದಲ್ಲಿ ಉಪ ಚುನಾವಣೆಗೆ ಎರಡು ದಿನ ಬಾಕಿ ಇರುವಾಗಲೇ ಕಾಂಗ್ರೆಸ್ ಮುಖಂಡರೋರ್ವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದ ಘಟನೆ ನಡೆಸಿದೆ.
ರಾಜ್ ಕಿಶೋರ್ ಬೌರಿ ಅಲಿಯಾಸ್ ಬಿಟ್ಕಾ ಬೌರಿ (35) ಹತ್ಯೆಯಾದ ಕಾಂಗ್ರೆಸ್ ಕಾರ್ಯಕರ್ತ. ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ರಾಂಚಿಯಿಂದ ಸುಮಾರು 50 ಕಿಮೀ ದೂರದಲ್ಲಿರುವ ಸೌಂದ ಪ್ರದೇಶದ ಭುರ್ಕುಂದ-ಪತ್ರಾಟು ರಸ್ತೆಯಲ್ಲಿರುವ ಹಳೆಯ ಪೆಟ್ರೋಲ್ ಪಂಪ್ ಬಳಿ ಮೋಟಾರ್ ಸೈಕಲ್ನಲ್ಲಿ ಬಂದ ದುಷ್ಕರ್ಮಿಗಳು ರಾಜ್ ಕಿಶೋರ್ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಜ್ ಕಿಶೋರ್ ಬಾರ್ಕಗಾಂವ್ನ ಕಾಂಗ್ರೆಸ್ ಶಾಸಕ ಅಂಬಾ ಪ್ರಸಾದ್ ಅವರ ಪತ್ರಾಟು ಬ್ಲಾಕ್ ಪ್ರತಿನಿಧಿಯಾಗಿದ್ದರು. ಗುಂಡಿನ ದಾಳಿಯಿಂದ ರಕ್ತದ ಮಡುವಿನಲ್ಲಿ ಬಿದ್ದಿದ್ದ ರಾಜ್ ಕಿಶೋರ್ ಅವರನ್ನು ಕೂಡಲೇ ಭುರ್ಕುಂಡದ ಸಿಸಿಎಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಅವರು ಸಾವನ್ನಪ್ಪಿದ್ದರು.
ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೆತ್ತಿಕೊಳ್ಳಲಾಗಿದೆ. ದುಷ್ಕರ್ಮಿಗಳ ಪತ್ತೆಗೆ ಶೋಧ ಕಾರ್ಯ ಆರಂಭಗೊಂಡಿದೆ ಎಂದು ಭುರ್ಕುಂದ ಪೊಲೀಸ್ ಠಾಣೆಯ ಉಸ್ತುವಾರಿ ಅಮಿತ್ ಕುಮಾರ್ ಹೇಳಿದ್ದಾರೆ.