ಬೆಂಗಳೂರು, ಫೆ 26 (DaijiworldNews/MS): ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ಸಂಬಂಧ ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದೆ. ಇದೇ ಗೊಂದಲ ನಿವಾರಣೆಗಾಗಿ ಇಂದು ಬೆಂಗಳೂರಿಲ್ಲಿ ಜೆಡಿಎಸ್ ಮುಖಂಡರ ಸಭೆಯನ್ನು ಕರೆಯಲಾಗಿತ್ತು. ಆದರೆ ಇಂದಿನ ಜೆಡಿಎಸ್ ಮುಖಂಡರ ಸಭೆಯನ್ನು ದಿಢೀರ್ ರದ್ದುಗೊಳಿಸಲಾಗಿದೆ.
ಜೆಡಿಎಸ್ ಮುಖಂಡರ ಸಭೆ ರದ್ದುಗೊಳಿಸಿದ ವಿಚಾರವಾಗಿ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಇಂದಿನ ಸಭೆ ರದ್ದಾಗಿರಬಹುದು ಆದರೆ ನನ್ನ ನಿಲುವು ಬದಲಾಗಿಲ್ಲ. ನಾನು ಮತ್ತೆ ಹಾಸನ ಕಾರ್ಯಕರ್ತರ ಸಭೆ ಕರೆಯುವುದಿಲ್ಲ.ದೇವೇಗೌಡರೇ ಕಾರ್ಯಕರ್ತರ ಜತೆ ಮಾತನಾಡುತ್ತಿದ್ದಾರೆ ಆರೋಗ್ಯ ಸಮಸ್ಯೆ ಇದ್ದರೂ ಚರ್ಚೆ ನಡೆಸಿದ್ದೌ ಅವರ ಬಗ್ಗೆ ಯಾರಿಗೂ ಕಾಳಜಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಕರ್ನಾಟಕ ಪ್ರದೇಶ ಜನತಾದಳದ ವ್ಯವಸ್ಥಾಪಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಇಂದು ಜೆಡಿಎಸ್ ಕಚೇರಿಯಲ್ಲಿ ಹಾಸನ ಜಿಲ್ಲೆಗೆ ಸಂಬಂಧಪಟ್ಟಂತೆ ಪಕ್ಷದ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ಮಾಜಿ ಜಿಲ್ಲಾ ಪಂಚಾಯ್ತಿ ಮತ್ತು ತಾಲೂಕು ಪಂಚಾಯ್ತಿ ಸದಸ್ಯರು, ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಸದಸ್ಯರು, ನಗರಸಭೆ ಸದಸ್ಯರು ಹಾಗೂ ಇತರೆ ಪಕ್ಷದ ಮುಖಂಡರುಗಳ ಸಭೆ ಕರೆಯಲಾಗಿತ್ತು. ಈ ಸಭೆಯನ್ನು ಮುಂದೂಡಲಾಗಿದೆ ಎಂದಿದ್ದಾರೆ.