ಥಾಣೆ, ಫೆ 26 (DaijiworldNews/HR): ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಮುಸ್ಲಿಂ ಸಮುದಾಯವನ್ನು ಬೆಂಬಲಿಸಲಿಲ್ಲ ಎಂದು ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಅಧ್ಯಕ್ಷ ಅಸಾದ್ದುದಿನ್ ಓವೈಸಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಓವೈಸಿ, ಮುಸ್ಲಿಂ ಯುವಕರು ತಮ್ಮ ಹಕ್ಕುಗಳಿಗಾಗಿ ಹೋರಾಡಲು ದೇಶದಲ್ಲಿ ಪ್ರಬಲ ಶಕ್ತಿಯಾಗಬೇಕು. ಅಜಿತ್ ಪವಾರ್, ಸುಪ್ರಿಯಾ ಸುಳೆ, ಶರದ್ ಪವಾರ್, ಉದ್ಧವ್ ಠಾಕ್ರೆ, ಏಕನಾಥ್ ಶಿಂಧೆ ಮತ್ತು ದೇವೇಂದ್ರ ಫಡ್ನವಿಸ್ ಅವರು ನಾಯಕರಾಗಲು ಸಾಧ್ಯವಾದರೆ, ನೀವೇಕೆ ನಾಯಕರಾಗಲು ಸಾಧ್ಯವಿಲ್ಲ? ಎಂದು ಪ್ರಶ್ನಿಸಿದ್ದಾರೆ.
ಎಐಎಂಐಎಂ ಅನ್ನು 65 ವರ್ಷಗಳ ಹಿಂದೆ ಕಟ್ಟಲಾಗಿದ್ದು, ಆರಂಭದಲ್ಲಿ ನಮ್ಮ ಪಕ್ಷದ ಸಭೆಗಳಿಗೆ ಬೆರಳೆಣಿಕೆಯಷ್ಟು ಜನ ಹಾಜರಾಗುತ್ತಿದ್ದರು. ಆದರೆ ಆ ಸಂಖ್ಯೆ ಈಗ ಸಾವಿರಕ್ಕೇರಿದೆ ಎಂದರು.