ನವದೆಹಲಿ, ಫೆ 27 (DaijiwsorldNews/HR): ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಬಂಧಿಸಿರುವುದನ್ನು ಖಂಡಿಸಿ ಆಮ್ ಆದ್ಮಿ ಪಕ್ಷ (ಎಎಪಿ) ಸೋಮವಾರ ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಿಸಿದೆ.
ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಬಂಧನದಲ್ಲಿರುವ ಸಿಬಿಐ ಪ್ರಧಾನ ಕಚೇರಿಯ ಹೊರಗೆ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ನಿರೀಕ್ಷೆಯಿದೆ.
ಇನ್ನು ಸೋಮವಾರ(ಇಂದು) ಮಧ್ಯಾಹ್ನ 12 ಗಂಟೆಗೆ ದೆಹಲಿಯಲ್ಲಿರುವ ಭಾರತೀಯ ಜನತಾ ಪಕ್ಷದ ಪ್ರಧಾನ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಲು ಪಕ್ಷವು ಯೋಜಿಸಿದೆ.