ಬೆಂಗಳೂರು, ಫೆ 27 (DaijiwsorldNews/HR): ಈ ಬಾರಿ ಕಾಂಗ್ರೆಸ್ ಮತ್ತು ಬಿಜೆಪಿಯ ಬದಲಾಗಿ ಸಾವರ್ಕರ್ ಹಾಗೂ ಟಿಪ್ಪುವಿನ ಸಿದ್ಧಾಂತಗಳ ನಡುವೆ ಚುನಾವಣೆ ನಡೆಯಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದು, ಇದಕ್ಕೆ ನನ್ನ ಒಪ್ಪಿಗೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಟಿಪ್ಪು ವರ್ಸಸ್ ಸಾವರ್ಕರ್ ಎಂಬ ಕಟೀಲ್ ಹೇಳಿಕೆಯನ್ನು ಶಾಸಕ ಎಂ.ಪಿ. ರೇಣುಕಾಚಾರ್ಯ ಸೇರಿದಂತೆ ಇನ್ನೂ ಕೆಲ ಬಿಜೆಪಿ ನಾಯಕರು ಸಮರ್ಥಿಸಿಕೊಂಡಿದ್ದಾರೆ ಆದರೆ ನನ್ನ ಒಪ್ಪಿಗೆ ಇಲ್ಲ. ಅದಕ್ಕಿಂತ ಮುಖ್ಯವಾಗಿ ಹೆಚ್ಚು ಪರಿಶ್ರಮಪಡಬೇಕು. ಈ ಚುನಾವಣೆಯು ಬಿಜೆಪಿಯ ನೀತಿಗಳು ಮತ್ತು ಯೋಜನೆಗಳು ನಿರೂಪಣೆಯಾಗಿರುತ್ತದೆ ಎಂದರು.
ಇನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರ ಜನಪ್ರಿಯ ಯೋಜನೆಗಳನ್ನು ಮನೆ-ಮನೆಗೆ ತಲುಪಿಸುವುದೇ ಮುಂದಿನ ಚುನಾವಣೆಯ ಮಂತ್ರ. ಇನ್ನು ಜೆಡಿಎಸ್ಗೆ ಫೈಟ್ ಕೊಡಲು ಕಾಂಗ್ರೆಸ್ ಹಾಗೂ ಜೆಡಿಎಸ್ ಕಸರತ್ತು ನಡೆಸಿವೆ. ಆದರೂ ರಾಜ್ಯದಲ್ಲಿ ಬಿಜೆಪಿಗೆ ಬಹುಮತ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.