ಶಿವಮೊಗ್ಗ, ಫೆ 27 (DaijiwsorldNews/HR): ವಿಶ್ವಮಾನ ತತ್ವಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತಮ ಉದಾಹರಣೆ. ಪ್ರಧಾನಿ ಮೋದಿ ಅವರು ಇಂದಿನ ವಿಶ್ವಮಾನವ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಣ್ಣಸಿದ್ದಾರೆ.
ಶಿವಮೊಗ್ಗದ ಸೋಗಾನೆಯಲ್ಲಿ ನೂತನ ವಿಮಾನ ನಿಲ್ದಾಣದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಅವರು, ನನ್ನ ಹುಟ್ಟುಹಬ್ಬದ ದಿನವೇ ವಿಮಾ ನಿಲ್ದಾಣ ಉದ್ಘಾಟನೆ ಮಾಡಬೇಕು. ಅಂದು ನಾನು ಬಂದೇ ಬರುತ್ತೇನೆ ಎಂದು ಮೋದಿ ಹೇಳಿದ್ದರು. ಅದಕ್ಕಾಗಿ ಅವರಿಗೆ ಪ್ರಣಾಮ ಸಲ್ಲಿಸುತ್ತೇನೆ ಎಂದರು.
ಇನ್ನು ಈ ದಿನ ಬಹಳ ವೈಶಿಷ್ಟ್ಯಪೂರ್ಣವಾದದ್ದು ಮಲೆನಾಡು ಭಾಗದ ಜನರ ಕನಸು ನನಸಾಗುತ್ತಿರುವ ಶುಭ ಸಂಕೇತ. ಮೋದಿ ಆಶೀರ್ವಾದದಿಂದ ನಾಡಿನ ಜನರ ಸೇವೆ ಮಾಡಲು ಅವಕಾಶ ಸಿಕ್ಕಿದೆ. ಇಂತಹ ಅವಕಾಶ ನನಗೆ ಸಿಕ್ಕಿದ್ದಕ್ಕೆ ಜನರಿಗೆ ನಾನು ಋಣಿಯಾಗಿದ್ದೇನೆ ಎಂದಿದ್ದಾರೆ.
ನಾನು ಸಾಮಾಜಿಕ ನ್ಯಾಯವನ್ನು ಎಲ್ಲರಿಗೂ ಒದಗಿಸಿಕೊಟ್ಟಿದ್ದೇನೆ. ಮೋದಿ ನೇತೃತ್ವದಲ್ಲಿ ಡಬಲ್ ಇಂಜಿನ್ ಸರ್ಕಾರದಿಂದ ಸಾಕಷ್ಟು ಅಭಿವೃದ್ಧಿಯಾಗಿದೆ ಎಂದು ಹೇಳಿದ್ದಾರೆ.