ಹೈದರಾಬಾದ್, ಮಾ 01 (DaijiworldNews/DB): ಯುವಕನೊಬ್ಬ ಸ್ನೇಹಿತರೊಂದಿಗೆ ಬ್ಯಾಡ್ಮಿಂಟನ್ ಆಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.
ಶ್ಯಾಮ್ ಯಾದವ್ ಮೃತ ಯುವಕ. ಹೈದರಾಬಾದ್ನ ಲಾಲಾಪೇಟ್ನಲ್ಲಿರುವ ಪ್ರೊ. ಜಯಶಂಕರ್ ಒಳಾಂಗಣ ಕ್ರೀಡಾಂಗಣದಲ್ಲಿ ಶ್ಯಾಮ್ ಯಾದವ್ ಅವರು ಮಂಗಳವಾರ ಸ್ನೇಹಿತರೊಂದಿಗೆ ಬ್ಯಾಡ್ಮಿಂಟನ್ ಆಡುತ್ತಿದ್ದರು. ಈ ವೇಳೆ ಏಕಾಏಕಿ ಏದುಸಿರು ಬಿಡುತ್ತಾ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು.
ದಿನನಿತ್ಯ ಕಚೇರಿಯಿಂದ ಬಂದು ಬ್ಯಾಡ್ಮಿಂಟನ್ ಆಡಲು ಹೋಗುತ್ತಿದ್ದ ಶ್ಯಾಮ್ ಯಾದವ್ ಎಂದಿನಂತೆ ಮಂಗಳವಾರವೂ ಸ್ನೇಹಿತರೊಂದಿಗೆ ಬ್ಯಾಡ್ಮಿಂಟನ್ ಆಡಲು ಹೋಗಿದ್ದರು.