ಬೆಂಗಳೂರು,ಮಾ 01 (DaijiworldNews/MS): ಸರ್ಕಾರದ ನೀತಿ ನಿರ್ಣಯದಂತೆ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯನ್ನು ಕಾಯ್ದಿರಿಸಿ, ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಿ ಅಧಿಕೃತ ಆದೇಶ ಹೊರಡಿಸಿದೆ.ಹೀಗಾಗಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಯುತ್ತಿದ್ದ ಸರ್ಕಾರಿ ನೌಕರರ ಮುಷ್ಕರ ಅಂತ್ಯವಾಗುವ ಲಕ್ಷಣ ಗೋಚರಿಸುತ್ತಿದೆ.
ರಾಜ್ಯ ಸರ್ಕಾರ ಕೇವಲ ಒಂದು ದಿನದಲ್ಲೇ ಈ ನಿರ್ಧಾರ ಮಾಡಿರುವುದರಿಂದ ನಾಳೆಯಿಂದ ಸರ್ಕಾರಿ ನೌಕರರು ಎಂದಿನಂತೆ ಕೆಲಸಕ್ಕೆ ಹಾಜರಾಗುವ ಸಾಧ್ಯತೆ ಇದೆ.
2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 01ನೇ ಏಪ್ರಿಲ್ 2023 ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇಕಡ 17 ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ ಎಂದು ಆದೇಶದಲ್ಲಿ ತಿಳಿಸಿದೆ