ಮಂಡ್ಯ ಮಾ 02 (DaijiworldNews/MS):ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಪಕ್ಷಂತರ ಪರ್ವ ಜೋರಾಗುತ್ತಿದೆ. ಸಚಿವ ನಾರಾಯಣಗೌಡ ಪಕ್ಷಾಂತರದ ಸುಳಿವು ನೀಡಿದ್ದು, ಅವರು ಬಿಜೆಪಿ ತೊರೆದು ಕಾಂಗ್ರೆಸ್ಗೆ ಸೇರ್ಪಡೆಯಾಗುವ ಸಾಧ್ಯತೆ ಬಹುತೇಕವಿದೆ.
ಈ ಬಗ್ಗೆ ಮಂಡ್ಯದ ಕೆ.ಆರ್.ಪೇಟೆ ಯಲ್ಲಿ ಮಾತನಾಡಿದ ಸಚಿವ ನಾರಾಯಣಗೌಡ, ಕಾಂಗ್ರೆಸ್ ನಿಂದ ಆಹ್ವಾನ ಬಂದಿರೋದು ನಿಜ. ಆದರೆ ಸೇರ್ಪಡೆ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ಆಪ್ತರು ಹಾಗೂ ಹಿತೈಷಿಗಳ ಜೊತೆ ಚರ್ಚಿಸಿ ಅಭಿಪ್ರಾಯ ಕೇಳಬೇಕು. ಅಭಿಪ್ರಾಯ ಕೇಳಿದ ಬಳಿಕ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ ಮಾಡುವುದು ಎಂದರು.
ಇನ್ನು ಕೆ.ಆರ್.ಪೇಟೆ ಕಾಂಗ್ರೆಸ್ನಲ್ಲಿ ನಾಯಕತ್ವದ ಕೊರತೆ ಇದೆ. ಅದಕ್ಕಾಗಿ ಪಕ್ಷಕ್ಕೆ ಬರುವಂತೆ ಒತ್ತಾಯ ಇದೆ. ಯಾವುದೇ ನಿರ್ಧಾರ ತೆಗೆದುಕೊಂಡರೂ ತಿಳಿಸುತ್ತೇನೆ ಎಂದರು.