ನಾಗಾಲ್ಯಾಂಡ್, ಮಾ 02 (DaijiworldNews/HR): ಫೆ. 16ರಂದು ತ್ರಿಪುರಾ ಮತ್ತು ಫೆ. 27ರಂದು ನಾಗಾಲ್ಯಾಂಡ್ ಹಾಗೂ ಮೇಘಾಲಯ ವಿಧಾನಸಭೆಗಳಿಗೆ ಚುನಾವಣೆ ನಡೆದು ಇಂದು ಮತ ಎಣಿಕೆ ನಡೆಯುತ್ತಿದ್ದು, ನಾಗಾಲ್ಯಾಂಡ್ ಇತಿಹಾಸದಲ್ಲಿ ಮೊದಲ ಬಾರಿಗೆ ಇಬ್ಬರು ಮಹಿಳಾ ಅಭ್ಯರ್ಥಿಗಳು ವಿಧಾನಸಭೆಗೆ ಆಯ್ಕೆಯಾಗಿದ್ದಾರೆ.
ನಾಗಾಲ್ಯಾಂಡ್ ರಾಜ್ಯ ಸ್ಥಾನಮಾನವನ್ನು ಪಡೆದ 60 ವರ್ಷಗಳ ನಂತರ ಇಂದು ಮೊದಲ ಬಾರಿ ಮಹಿಳಾ ಶಾಸಕಿ ಆಯ್ಕೆಯಾಗಿದ್ದು, ಬಿಜೆಪಿಯ ಮಿತ್ರಪಕ್ಷವಾದ ಎನ್ಡಿಪಿಪಿಯ ಹೆಕಾನಿ ಜಖಾಲು ಅವರು ದಿಮಾಪುರ್ 3 ಕ್ಷೇತ್ರದಿಂದ ಗೆದ್ದಿದ್ದಾರೆ.
ಇನ್ನು ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಒಟ್ಟು 183 ಅಭ್ಯರ್ಥಿಗಳ ಪೈಕಿ ನಾಲ್ವರು ಮಹಿಳೆಯರಲ್ಲಿ 48 ವರ್ಷದ ವಕೀಲೆ ಹೆಕಾನಿ ಜಖಾಲು ಒಬ್ಬರು.