ಮುಂಬೈ, ಮಾ 02 (DaijiworldNews/HR): ಮಾಜಿ ವಿಶ್ವಸುಂದರಿ, ನಟಿ ಸುಶ್ಮಿತಾ ಸೇನ್ ಅವರಿಗೆ ಹೃದಯಾಘಾತವಾಗಿರುವ ಬಗ್ಗೆ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಈ ಕುರಿತು ಇನ್ಸ್ಟಾಗ್ರಾಮ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನನಗೆ ಎರಡು ದಿನಗಳ ಹಿಂದೆ ಹೃದಯಾಘಾತವಾಗಿದ್ದು, ಹೃದಯಾಘಾತ ಆದ ಕೂಡಲೇ ಅವರಿಗೆ ವೈದ್ಯಕೀಯ ನೆರವು ಸಿಕ್ಕಿತು. ವೈದ್ಯರ ಸಲಹೆ ಮೇರೆಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ ಮತ್ತು ಸ್ಟೆಂಟ್ಸ್ ಅಳವಡಿಸಲಾಗಿದೆ. ಈಗ ಆರೋಗ್ಯ ಸ್ಥಿರವಾಗಿದೆ ಎಂದಿದ್ದಾರೆ.
ಇನ್ನು ನನ್ನ ಕಷ್ಟದ ಸಂದರ್ಭದಲ್ಲಿ ನನಗೆ ಹಲವರು ನೆರವಿಗೆ ಬಂದಿದ್ದು, ಅವರಿಗೆಲ್ಲ ಪ್ರತ್ಯೇಕ ಪೋಸ್ಟ್ನಲ್ಲಿ ಧನ್ಯವಾದ ತಿಳಿಸುವೆ ಎಂದು ಹೇಳಿದ್ದಾರೆ.