ಹತ್ರಾಸ್, ಮಾ 03 (DaijiworldNews/HR): 2020ರಲ್ಲಿ ಉತ್ತರಪ್ರದೇಶದ ಹತ್ರಾಸ್ನಲ್ಲಿ ನಡೆದ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ಉಳಿದ ಮೂವರು ಆರೋಪಿಗಳನ್ನು ಖುಲಾಸೆಗೊಳಿಸಿದೆ.
ಪ್ರಮುಖ ಆರೋಪಿ ಸಂದೀಪ್(20) ವಿರುದ್ಧ ಅತ್ಯಾಚಾರ ಮತ್ತು ಕೊಲೆ ಆರೋಪ ಸಾಬೀತಾಗಿಲ್ಲ ಎಂದು ಆತನ ಪರ ವಕೀಲ ಮುನ್ನಾ ಸಿಂಗ್ ಹೇಳಿದ್ದಾರೆ. ಉದ್ದೇಶ ಪೂರ್ವಕವಲ್ಲದ ಕೊಲೆ ಆರೋಪದ ಮೇರೆಗೆ ಆತನಿಗೆ ಜೀವಾವಧಿ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಲಾಗಿದೆ.
ಇನ್ನು ಉಳಿದ ಮೂವರು ಆರೋಪಿಗಳಾದ ರವಿ, ಲವ್ ಕುಶ್ ಮತ್ತು ರಾಮುನನ್ನು ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆ ದೋಷಮುಕ್ತಗೊಳಿಸಲಾಗಿದೆ.