ನವದೆಹಲಿ, ಮಾ 03 (DaijiworldNews/DB): ಜ್ವರದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ.
ಮಾರ್ಚ್ 2ರ ಗುರುವಾರ ಜ್ವರದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿಯವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎದೆ ಔಷಧ ವಿಭಾಗದ ಹಿರಿಯ ಸಲಹೆಗಾರ ಡಾ.ಅರೂಪ್ ಬಸು ಅವರ ಮೇಲ್ವಿಚಾರಣೆಯಲ್ಲಿ ಸೋನಿಯಾ ಗಾಂಧಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಆರೋಗ್ಯದ ಕುರಿತು ಆಸ್ಪತ್ರೆಯು ಹೆಲ್ತ್ ಬುಲೆಟಿನ್ ಬಿಡುಗಡೆಗೊಳಿಸಿದ್ದು, ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದೆ.