ವಿಜಯಪುರ, ಮಾ 05 (DaijiworldNews/HR): ವಿಜಯಪುರ ತಾಲೂಕಿನ ಕೃಷ್ಣಾ ನಗರದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಶನಿವಾರ ಸಂಭವಿಸಿದ್ದ ಬಾಯ್ಲರ್ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಐವರಲ್ಲಿ ಪಶ್ಚಿಮ ಬಂಗಾಳ ಮೂಲದ ಓರ್ವ ಕಾರ್ಮಿಕ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.
ಮೃತ ಕಾರ್ಮಿಕನನ್ನು ಪಶ್ಚಿಮ ಬಂಗಾಳ ಮೂಲದ 21 ವರ್ಷದ ಸಂದೀಪ ಮಂಡಲ ಎಂದು ಗುರುತಿಸಲಾಗಿದೆ.
ಬಾಯ್ಲರ್ ಸ್ಫೋಟ ಘಟನೆಯಲ್ಲಿ ಗಾಯಗೊಂಡಿದ್ದ ಐವರು ಕಾರ್ಮಿಕರನ್ನು ವಿಜಯಪುರ ನಗರದ ಬಿ.ಎಲ್.ಡಿ.ಇ. ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೇ ಸಂದೀಪ ಮೃತಪಟ್ಟಿದ್ದಾನೆ.
ಇನ್ನು ಗಂಭೀರವಾಗಿ ಗಾಯಗೊಂಡಿರುವ ಇತರೆ ಕಾರ್ಮಿಕರಾದ ಪರಸನಜಿತ ಮಂಡಲ, ರಾಜಕುಮಾರ ರಾಮ್ ಇವರ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ ಎಂದು ವರದಿಯಾಗಿದೆ.