ತುಮಕೂರು, ಮಾ. 05 (DaijiworldNews/SM): ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಗರಣಗಳನ್ನು ವಿರೋಧಿಸಿ ಇದೇ ಮಾರ್ಚ್ 9ರಂದು ರಾಜ್ಯ ಕಾಂಗ್ರೆಸ್ ಘಟಕ 'ಕರ್ನಾಟಕ ಬಂದ್'ಗೆ ಕರೆ ನೀಡಿದೆ.
ಆಡಳಿತಾರೂಢ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧದ ಹೋರಾಟದ ಭಾಗವಾಗಿ ಕರ್ನಾಟಕ ಕಾಂಗ್ರೆಸ್ ತನ್ನ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಕುಮಾರ್ ಎಂವಿ ಅವರಿಂದ ಲೋಕಾಯುಕ್ತ ಅಧಿಕಾರಿಗಳು 8 ಕೋಟಿ ರೂಪಾಯಿ ಹಣವನ್ನು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಮಾರ್ಚ್ 9 ರಂದು ಎರಡು ಗಂಟೆಗಳ ಕಾಲ ಬಂದ್ಗೆ ಕರೆ ನೀಡಿದೆ. ಮಾರ್ಚ್ 9 ರಂದು ಕರ್ನಾಟಕ ಬಂದ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕರೆ ಕೊಟ್ಟಿದ್ದು, ತುಮಕೂರಿನ ಮಾತನಾಡಿದ ಅವರು, ಬಿಜೆಪಿ ಭ್ರಷ್ಟಾಚಾರ ಖಂಡಿಸಿ ಮಾರ್ಚ್ 9 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 11 ಗಂಟೆವರೆಗೆ ಎಲ್ಲಾ ವ್ಯಾಪಾರಿಗಳು ಬಂದ್ಗೆ ಬೆಂಬಲ ನೀಡುವಂತೆ ಕೋರಿದ್ದಾರೆ.
'ಬಂದ್ ವೇಳೆ ಯಾವುದೇ ಶಾಲೆ, ಕಾಲೇಜು ಆಸ್ಪತ್ರೆ ಸಾರ್ವಜನಿಕರಿಗೆ ತೊಂದರೆಯಾಗಬಾರದು, ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಯಾರೂ ಮಾಡಬಾರದು. ಕರ್ನಾಟಕದಲ್ಲಿ ಭ್ರಷ್ಟಾಚಾರ ಮುಕ್ತಮಾಡಲು ನಿಮ್ಮ ಸಹಕಾರ ಬೇಕು. ಅದಕ್ಕಾಗಿ ಎಲ್ಲ ಸಂಘ, ಸಂಸ್ಥೆಗಳು ಸಹಕಾರ ಕೊಡಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.