ಬೆಂಗಳೂರು, ಮಾ 06 (DaijiworldNews/MS): ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮೊಣಕಾಲು ನೋವಿನ ಚಿಕಿತ್ಸೆಗಾಗಿ ಕಳೆದ ಐದು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಚಿಕಿತ್ಸೆ ಬಳಿಕ ಅವರು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಮಾ. 6ರ ಇಂದು ಡಿಸ್ಚಾರ್ಜ್ ಮಾಡಲಾಗಿದೆ.
ಇನ್ನು, ಮುಂದಿನ ದಿನಗಳಲ್ಲಿ ನಡೆಯುವ ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ ಎನ್ನಲಾಗಿದೆ.
ವಿಧಾನಸಭೆ ಚುನಾವಣೆಗೆ ತಯಾರಿಯಲ್ಲಿರುವ ಜೆಡಿಎಸ್ ಮಾರ್ಚ್ 26 ರಂದು ಜೆಡಿಎಸ್ ತನ್ನ ಪಂಚರತ್ನ ಯಾತ್ರೆಯ ಸಮಾರೋಪ ಕಾರ್ಯಕ್ರಮಕ್ಕೂ ಮುನ್ನ ಬೆಂಗಳೂರಿನ ಕುಂಬಳಗೋಡಿನಿಂದ ಮೈಸೂರಿನವರೆಗೆ 100 ಕಿಲೋಮೀಟರ್ ತೆರೆದ ವ್ಯಾನ್ನಲ್ಲಿ ಪಕ್ಷದ ವರಿಷ್ಠ ಎಚ್ಡಿ ದೇವೇಗೌಡರನ್ನು ಕರೆದುಕೊಂಡು ಹೋಗುವ ಪ್ಲ್ಯಾನ್ ಹಾಕಿಕೊಂಡಿದೆ.