ಬಿಹಾರ, ಮಾ 06 (DaijiworldNews/HR): ಲ್ಯಾಂಡ್ ಫಾರ್ ಜಾಬ್ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಅವರ ಪಾಟ್ನಾ ನಿವಾಸದ ಮೇಲೆ ಸಿಬಿಐ ಇಂದು ದಾಳಿ ನಡೆಸಿರುವುದಾಗಿ ವರದಿಯಾಗಿದೆ.
ಈ ಪ್ರಕರಣದಲ್ಲಿ ಸಿಬಿಐ ಈಗಾಗಲೇ ಆರೋಪಪಟ್ಟಿ ಸಲ್ಲಿಸಿದ್ದು, ವಿಶೇಷ ನ್ಯಾಯಾಲಯವು ಮಾಜಿ ರೈಲ್ವೇ ಸಚಿವ ಲಾಲು ಪ್ರಸಾದ್ ಮತ್ತು ಅವರ ಕುಟುಂಬ ಸದಸ್ಯರು ಸೇರಿದಂತೆ ಆರೋಪಿಗಳಿಗೆ ಮಾರ್ಚ್ 15 ರಂದು ಸಮನ್ಸ್ ನೀಡಿದೆ.
ಇನ್ನು ಪ್ರಕರಣದ ಮುಂದಿನ ತನಿಖೆಗೆ ಸಂಬಂಧಿಸಿದಂತೆ ಸಿಬಿಐ ತಂಡ ಭೇಟಿ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.