ನವದೆಹಲಿ, ಮಾ 06 (DaijiworldNews/HR): ದೆಹಲಿ ಲಿಕ್ಕರ್ ಪಾಲಿಸಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ದೆಹಲಿಯ ಮಾಜಿ ಸಿಎಂ, ಆಮ್ ಆದ್ಮಿ ಪಾರ್ಟಿ ನಾಯಕ ಮನೀಶ್ ಸಿಸೋಡಿಯಾ ಅವರನ್ನು ಮಾರ್ಚ್ 20ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸಿಸೋಡಿಯಾ ಅವರನ್ನು ಫೆ.26ರಂದು ಸಿಬಿಐ ಬಂಧಿಸಿದ್ದು, ಸಿಬಿಐ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ಸೋಮವಾರ ಸಿಬಿಐ ಕೋರ್ಟ್ಗೆ ಹಾಜರುಪಡಿಸಲಾಗಿತ್ತು.
ಬಂಧನದ ಬೆನ್ನಲ್ಲೇ ಮನೀಶ್ ಸಿಸೋಡಿಯಾ ಅವರು ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಆದರೆ, ಸಿಸೋಡಿಯಾ ಅರ್ಜಿಯನ್ನು ನಿರಾಕರಿಸಿದ ಕೋರ್ಟ್, ನೇರವಾಗಿ ಸುಪ್ರೀಂ ಕೋರ್ಟ್ಗೆ ಬರುವ ಅಗತ್ಯವಿಲ್ಲ. ಹೈಕೋರ್ಟ್ಗೆ ಅರ್ಜಿ ಸಲ್ಲಿಸಿಕೊಳ್ಳಬಹುದು ಎಂದು ಹೇಳಿತ್ತು.
ಇನ್ನು ಜಾಮೀನು ಅರ್ಜಿ ವಿಚಾರಣೆಯು ಮಾರ್ಚ್ 10ಕ್ಕೆ ನಡೆಯಲಿದೆ.