ಚಿಕ್ಕಮಗಳೂರು, ಮಾ 07 (DaijiworldNews/HR): ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
https://daijiworld.ap-south-1.linodeobjects.com/Linode/img_tv247/hr-070323-BKH.jpg
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸರ್ಕಾರ ಎರಡು ವರ್ಷಗಳಿಂದ ಭ್ರಷ್ಟಾಚಾರದಲ್ಲಿ ನಿರತವಾಗಿದ್ದು, ಬಿಜೆಪಿ ವಿಜಯಸಂಕಲ್ಪ ಯಾತ್ರೆಗೆ ಭ್ರಷ್ಟೋತ್ಸವ ಯಾತ್ರೆ ಎಂದು ಹೆಸರಿಡಬೇಕು ಎಂದರು.
ಇನ್ನು ಯಾವ ಮುಖ ಇಟ್ಟುಕೊಂಡು ವಿಜಯ ಸಂಕಲ್ಪ ಯಾತ್ರೆ ಮಾಡುತ್ತಿದ್ದಾರೆಯೋ ಗೊತ್ತಿಲ್ಲ. ಹೇಳಿಕೊಳ್ಳಲು ರಾಜ್ಯದಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ಯಾತ್ರೆಯಲ್ಲಿ ಭ್ರಷ್ಟಾಚಾರವನ್ನೇ ವೈಭವಿಕರಿಸಬೇಕಷ್ಟೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.