ಶಿಲ್ಲಾಂಗ್, ಮಾ 07 (DaijiworldNews/DB): ಮೇಘಾಲಯದ ಮುಖ್ಯಮಂತ್ರಿಯಾಗಿ ಸತತ ಎರಡನೇ ಅವಧಿಗೆ ನ್ಯಾಷನಲ್ ಪೀಪಲ್ಸ್ ಪಾರ್ಟಿ ಮುಖ್ಯಸ್ಥ ಸಂಗ್ಮಾ ಕಾನ್ರಾಡ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಶಿಲ್ಲಾಂಗ್ನ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಜರಗಿತು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭಾಗವಹಿಸಿದ್ದರು.
ಸಂಗ್ಮಾ ಕಾನ್ರಾಡ್ ಮುಖ್ಯಮಂತ್ರಿಯಾಗಿ, ಪ್ರೆಸ್ಟೋನ್ ಟೈನ್ಸಾಂಗ್ ಮತ್ತು ಸ್ನಿಯಾವ್ಭಾಲಾಂಗ್ ಧಾರ್ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ಎನ್ಸಿಪಿಯ ಪ್ರೆಸ್ಟೋನ್ ಟೈನ್ಸಾಂಗ್ ಮತ್ತು ಬಿಜೆಪಿಯ ಅಲೆಕ್ಸಾಂಡರ್ ಲಾಲೂ ಹೆಕ್ ಸೇರಿದಂತೆ 12 ಮಂದಿಯನ್ನೊಳಗೊಂಡ ಸಚಿವ ಸಂಪುಟದ ಸದಸ್ಯರಿಗೆ ಮೇಘಾಲಯ ರಾಜ್ಯಪಾಲ ಫಾಗು ಚೌಹಾಣ್ ಪ್ರಮಾಣ ವಚನ ಬೋಧಿಸಿದರು.