ಮಹಾರಾಷ್ಟ್ರ, ಮಾ 07 (DaijiworldNews/DB): ಗೋಮೂತ್ರ ಸಿಂಪಡಿಸಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಪಡೆಯಲಾಯಿತೇ ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಪ್ರಶ್ನಿಸಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರರ ಪ್ರತಿಮೆಗಳು ಸ್ವಾಧೀನಪಡಿಸಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿ ಬಿಜೆಪಿ ಮತ್ತು ಆರೆಸ್ಸೆಸ್ ವಿರುದ್ದ ಕಿಡಿ ಕಾರಿರುವ ಅವರು, ದೇಶಕ್ಕೆ ಸ್ವಾತಂತ್ರ್ಯ ಸಿಗಲು ನಮ್ಮ ಸ್ವಾತಂತ್ರ್ಯ ಹೋರಾಟಗಾರರು ರತ್ನಗಿರಿಯಲ್ಲಿ ಮಾತನಾಡಿದ ಅವರು, ಪ್ರಾಣ ತ್ಯಾಗ ಮಾಡಿದ್ದಾರೆ. ಅವರ ತ್ಯಾಗದಿಂದಾಗಿ ನಾವು ಸ್ವಾತಂತ್ರ್ಯ ಪಡೆದು ಇಂದು ಉತ್ತಮ ಜೀವನ ನಡೆಸುತ್ತಿದ್ದೇವೆ. ಆದರೆ ಬಿಜೆಪಿ, ಆರೆಸ್ಸೆಸ್ನವರು ನಡೆದುಕೊಳ್ಳುವ ರೀತಿ ನೋಡಿದರೆ ಗೋಮೂತ್ರ ಸಿಂಪಡಿಸಿ ಸ್ವಾತಂತ್ರ್ಯ ಪಡೆದುಕೊಂಡೆವೇ ಎಂಬುದಾಗಿ ಪ್ರಶ್ನಿಸಬೇಕಾಗಿದೆ ಎಂದರು.
ಸರ್ದಾರ್ ಪಟೇಲ್, ಸುಭಾಷ್ಚಂದ್ರ ಬೋಸ್ ಹೆಸರನ್ನು ಕದ್ದಿರುವ ಅವರು ಇದೀಗ ಬಾಳಾ ಸಾಹೇಬ್ ಠಾಕ್ರೆ ಹೆಸರನ್ನೂ ಬಳಸಿಕೊಳ್ಳುತ್ತಿದ್ದಾರೆ. ಬಾಳಾ ಸಾಹೇಬ್ ಠಾಕ್ರೆ ಅವರ ಫೋಟೋ ಇಲ್ಲದೆ ಶಿವಸೇನೆ ಹೆಸರು ಹೇಳದೆ ಮೋದಿ ಹೆಸರಿನಲ್ಲಿ ಮತ ಕೇಳಲಿ ಎಂದು ಇದೇ ವೇಳೆ ಉದ್ದವ್ ಠಾಕ್ರೆ ಸವಾಲು ಹಾಕಿದರು.