ಚಿಕ್ಕಬಳ್ಳಾಪುರ, ಮಾ 07 (DaijiworldNews/HR): ರಾಜ್ಯದ ಜನರಿಗೆ ಕುಡಿಯಲು ನೀರು ಕೊಡದ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಹಗಲು ಕನಸು ಕಾಣುತ್ತಿದೆ. ಇದಕ್ಕೆಲ್ಲ ಯುವಕರು ಉತ್ತರ ನೀಡಬೇಕು ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರಕಾರ ಮತ್ತೆ ಅಧಿಕಾರಕ್ಕೆ ಬರುವ ಎಲ್ಲಾ ರೀತಿಯ ಅವಕಾಶಗಳು ಇವೆ. ರಾಜ್ಯದ ರಾಜಕೀಯದಲ್ಲಿ ಯುವಕರು ಅತಿ ಹೆಚ್ಚಾಗಿ ತೊಡಗಿಸಿಕೊಳ್ಳುತ್ತಿದ್ದು ಮತ್ತೆ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತ ಎಂದರು.
ಇನ್ನು ದೇಶದಲ್ಲಿ ಯುವಕರು ಯಾವುದೇ ಕೆಲಸವನ್ನು ಆಸಕ್ತಿಯಿಂದ ಮಾಡುತ್ತಾರೆ. ದೇಶದ ಯುವಕರು ಮಾಡುವ ಮುಂದಾಲೋಚನೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಷ್ಟವಾಗಿದೆ. ಇದರಿಂದಾಗಿ ವಿವಿಧ ಕ್ಷೇತ್ರಗಳಲ್ಲಿ ಯುವಕರ ಪಾಲ್ಗೊಳ್ಳುವಿಕೆ ಹೆಚ್ಚಾಗಬೇಕು ಎನ್ನುವುದು ಅವರ ಆಶಯವಾಗಿದೆ ಎಂದು ಹೇಳಿದ್ದಾರೆ.