ನವದೆಹಲಿ, ಮಾ 07 (DaijiworldNews/HR): ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (ಎನ್ಡಿಡಿಪಿ) ಮುಖ್ಯಸ್ಥ ನೆಫಿಯು ರಿಯೊ ಅವರು ನಾಗಾಲ್ಯಾಂಡ್ ಮುಖ್ಯಮಂತ್ರಿಯಾಗಿ ಐದನೇ ಅವಧಿಗೆ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಕೊಹಿಮಾದ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಉಪಸ್ಥಿತರಿದ್ದರು.
ರಿಯೊ ಅವರು ಶನಿವಾರ ನಾಗಾಲ್ಯಾಂಡ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ರಾಜ್ಯಪಾಲ ಲಾ ಗಣೇಶನ್ಗೆ ಸಲ್ಲಿಸಿ, ರಾಜ್ಯದಲ್ಲಿ ಹೊಸ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು.