ದಾವಣಗೆರೆ, ಮಾ 07 (DaijiworldNews/MS): ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್ಡಿಎಲ್) ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ.
ಲೋಕಾಯುಕ್ತ ಪೊಲೀಸರು ತಮ್ಮನ್ನು ಬಂಧಿಸಲು ಮುಂದಾಗಿದ್ದಾರೆ ಎಂಬ ಸುಳಿವು ಸಿಗುತ್ತಿದ್ದಂತೆಯೇ ಅವರು ನಾಪತ್ತೆಯಾಗಿದ್ದರು. 2-3 ದಿನಗಳಾಗದರೂ ಅವರು ಎಲ್ಲಿದ್ದಾರೆ ಎಂಬ ಸುಳಿವು ಬಿಟ್ಟುಕೊಟ್ಟಿರಲಿಲ್ಲ. ಇದೀಗ ದಾವಣಗೆರೆಯ ತಮ್ಮ ನಿವಾಸದ ಬಳಿ ಕಾಣಿಸಿಕೊಂಡಿದ್ದಾರೆ. ಅವರಅಭಿಮಾನಿಗಳು ಕೂಡಾ ಮಾಡಳ್ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ.
ಭ್ರಷ್ಟಾಚಾರದಆರೋಪದಲ್ಲಿ ಬೇಲ್ ಸಿಕ್ಕರೂ ಯುದ್ಧವೇ ಗೆದ್ದು ಬಂದಂತೆ ಮಾಡಾಳು ಅವರ ಮೆರವಣಿಗೆ ಮಾಡಿದ್ದಾರೆ.
ಜಾಮೀನು ಆದೇಶ ತಲುಪಿದ 48 ಗಂಟೆಗಳ ಒಳಗಾಗಿ ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಬೇಕು ಎಂದು ಅವರಿಗೆ ಸೂಚಿಸಲಾಗಿದೆ.