ನವದೆಹಲಿ, ಮಾ 07 (DaijiworldNews/HR): ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರನ್ನ ದೆಹಲಿ ಕ್ಯಾಬಿನೆಟ್ನಲ್ಲಿ ಸಚಿವರನ್ನಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಲಹೆಯ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೇಮಿಸಿದ್ದಾರೆ.
ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದರ್ ಜೈನ್ ತಮ್ಮ ಸಚಿವ ಸ್ಥಾನಗಳಿಗೆ ರಾಜೀನಾಮೆ ನೀಡಿದ ನಂತರ ಈ ಬೆಳವಣಿಗೆ ನಡೆದಿದೆ.
ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದರ್ ಜೈನ್ ಭ್ರಷ್ಟಾಚಾರ ಪ್ರಕರಣಗಳಲ್ಲಿ ಬಂಧನಕ್ಕೊಳಗಾದ ನಂತರ ತಮ್ಮ ಸಚಿವ ಸ್ಥಾನಗಳಿಗೆ ರಾಜೀನಾಮೆ ನೀಡಿದ ನಂತರ ಈ ಬೆಳವಣಿಗೆ ಸಂಭವಿಸಿದೆ.