ಬಳ್ಳಾರಿ, ಮಾ 07 (DaijiworldNews/HR): ಬ್ರಿಟನ್ನಲ್ಲಿ ಭಾರತದ ಪ್ರಜಾಪ್ರಭುತ್ವದ ಬಗ್ಗೆ ರಾಹುಲ್ ಗಾಂಧಿ ಅತ್ಯಂತ ಬಾಲಿಶವಾಗಿ ಹೇಳಿಕೆ ನೀಡಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಬ್ರಿಟನ್, ಅಮೇರಿಕಾ ಎಂದು ಓಡಾಡುತ್ತಿರುವ ರಾಹುಲ್ ಗಾಂಧಿ ದೇಶದ ಪ್ರಜಾಪ್ರಭುತ್ವದ ಬಗ್ಗೆ ನೀಡುತ್ತಿರುವ ಹೇಳಿಕೆ ಖಂಡನೀಯ. ರಾಹುಲ್ ಗಾಂಧಿ ಅವರು ಬ್ರಿಟನ್ ನಲ್ಲಿ ಭಾರತದ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದಿದ್ದಾರೆ. ಪ್ರಪಂಚದ ಮೂರನೇ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತ ಎಂದರು.
ಇನ್ನು ರಾಹುಲ್ ಗಾಂಧಿ ಅವರಿಗೆ ಮಾನಸಿಕವಾಗಿ ಏನೋ ಸಮಸ್ಯೆ ಆದ ಹಾಗಿದ್ದು, ಸತತ ಸೋಲಿನಿಂದ ಹತಾಶರಾಗಿ ಅವರು ದೇಶದ ಪ್ರಜಾಪ್ರಭುತ್ವದ ಬಗ್ಗೆ ಅತ್ಯಂತ ಬಾಲಿಶವಾಗಿ ಮಾತನಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.