ನವದೆಹಲಿ, ಮಾ 08 (DaijiworldNews/HR): ಮಾಣಿಕ್ ಸಹಾ ಅವರು ಸತತ ಎರಡನೇ ಅವಧಿಗೆ ತ್ರಿಪುರಾದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಫೆಬ್ರವರಿ 16 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ನಂತರ ಮಾಣಿಕ್ ಸಹಾ ಅವರು ಇಂದು ತ್ರಿಪುರಾ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಇನ್ನು ಅಗರ್ತಲಾದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಭಾಗವಹಿಸಿದ್ದರು.